ಹೀಗೊಂದು ಪ್ರಶ್ನೆ,
ಎತ್ತರದಿಂದ ಒಂದು ಕಬ್ಬಿಣದ ಗುಂಡು ಮತ್ತು ಹಕ್ಕಿಯ ಗರಿಯೊಂದನ್ನು ಕೆಳಗೆ ಬಿಟ್ಟರೆ ಯಾವುದು ಮೊದಲು ನೆಲವನ್ನು ತಲುಪುತ್ತೆ?…
ಅದರಲ್ಲೇನಿದೆ? ಕಬ್ಬಿಣದ ಗುಂಡು ಹಕ್ಕಿಯ ಗರಿಗಿಂತ ತೂಕವಾಗಿರುವುದರಿಂದ ಗುಂಡು ಮೊದಲು ನೆಲವನ್ನು ತಲುಪುತ್ತದೆ ಅಂತಾ ನೀವನ್ನಬಹುದು. ಉತ್ತರ ಸರಿಯಾಗಿಯೇ ಇದೆ.
ವಸ್ತುವೊಂದು ನೆಲದೆಡೆಗೆ ಬೀಳಲು ನೆಲಸೆಳೆತ (earth’s gravity) ಕಾರಣ ಮತ್ತು ಈ ಸೆಳೆತವು ವಸ್ತುವಿನ ರಾಶಿಗೆ (mass) ತಕ್ಕಂತೆ ಇರುತ್ತದೆ ಅಂದರೆ ಹೆಚ್ಚಿನ ರಾಶಿವುಳ್ಳ ವಸ್ತುವು ಹೆಚ್ಚಿನ ನೆಲಸೆಳೆತಕ್ಕೆ ಒಳಗಾಗಿ ಬೇಗನೇ ನೆಲಕ್ಕೆ ಬೀಳುತ್ತದೆ ಅನ್ನುವ ಹೆಚ್ಚಿನ ವಿಷಯವನ್ನೂ ನೀವು ಮೇಲಿನ ಪ್ರಶ್ನೆಗೆ ಉತ್ತರವಾಗಿ ನೀಡಬಹುದು.
ಈಗ ಮೇಲಿನ ಪ್ರಶ್ನೆಗೆ ತುಸು ಕಟ್ಟುಪಾಡು ಹಾಕೋಣ,
ಅದೇ ಎತ್ತರದಿಂದ ಗಾಳಿಯಿರದ ಬರಿದುದಾಣದಲ್ಲಿ (vacuum chamber) ಅದೇ ಕಬ್ಬಿಣದ ಗುಂಡು ಮತ್ತು ಹಕ್ಕಿಯ ಗರಿಯನ್ನು ನೆಲದೆಡೆಗೆ ಬಿಟ್ಟರೆ ಯಾವುದು ಮೊದಲು ನೆಲವನ್ನು ತಲುಪುತ್ತದೆ?…
ಎರಡೂ ಒಂದೇ ಹೊತ್ತಿಗೆ ನೆಲವನ್ನು ತಲಪುತ್ತವೆ.
ಅನ್ನುವ ಉತ್ತರವನ್ನು ಕೇಳಿದರೆ ಅಚ್ಚರಿಯಾಗಬಹುದು.
ಗಾಳಿಯನ್ನಷ್ಟೇ ತೆಗೆದು ತಾಣವನ್ನು ಬರಿದಾಗಿಸಿದಾಗ ವಸ್ತುಗಳ ರಾಶಿಯಂತೂ ಬದಲಾಗುವುದಿಲ್ಲ ಹಾಗಾಗಿ ನೆಲಸೆಳೆತವು ಬದಲಾಗದು ಆದರೂ ತೂಕದ ಗುಂಡು ಮತ್ತು ಹಗುರವಾದ ಗರಿ ನೆಲವನ್ನು ಸೇರಲು ಅಷ್ಟೇ ಹೊತ್ತನ್ನು ಹೇಗೆ ತೆಗೆದುಕೊಂಡವು? ಉತ್ತರವನ್ನು ಕಂಡುಕೊಳ್ಳುವ ಮುನ್ನ, ಅಮೇರಿಕಾದ ನಾಸಾ ಬರಿದುದಾಣದಲ್ಲಿ (vacuum chamber) ನಡೆಸಿದ ಈ ಮೇಲಿನ ಎರಡೂ ಪ್ರಯೋಗಗಳನ್ನು ಕೆಳಗಿನ ವಿಡಿಯೋದಲ್ಲಿ ನೋಡೋಣ…
- ಗಾಳಿ ಇರುವಾಗ ವಸ್ತುಗಳ ಬೀಳುವಿಕೆ:
- ಗಾಳಿ ಬರಿದಾಗಿಸಿದಾಗ ವಸ್ತುಗಳ ಬೀಳುವಿಕೆ:
ಬೀಳುವಿಕೆಯ ಈ ಹಿನ್ನೆಲೆಯನ್ನು ತಿಳಿದುಕೊಳ್ಳೊಲು ಮೊದಲು ’ವೇಗಮಾರ್ಪು’ ಅನ್ನುವುದನ್ನು ಅರಿಯೋಣ. ವೇಗ (velocity) ಮಾರ್ಪಡುವ ಮಟ್ಟವನ್ನು ವೇಗಮಾರ್ಪು (acceleration) ಅನ್ನುತ್ತಾರೆ. ಉದಾಹರಣೆಗೆ: ಕಾರೊಂದನ್ನು 50 km/h ಅಷ್ಟು ವೇಗದಲ್ಲಿ ಓಡಿಸುತ್ತಿದ್ದೀರಿ ಅಂದುಕೊಳ್ಳೋಣ. ಈ ವೇಗ ಬದಲಾಗದೇ ಅಷ್ಟೇ ಇದ್ದರೆ ಅದರ ವೇಗಮಾರ್ಪು ಸೊನ್ನೆಯಾಗಿರುತ್ತದೆ. ಏಕೆಂದರೆ ಕಾರಿನ ವೇಗ ಮಾರ್ಪಡದೆ ಅಷ್ಟೇ ಇದೆ. ಈಗ ಕಾರಿನ ವೇಗ ಸೆಕೆಂಡಿಗೆ 1 km ನಷ್ಟು ಬದಲಾಗುತ್ತಾ ಹೊರಟರೆ ಅದರ ವೇಗಮಾರ್ಪು 1 km/s2 ಆಗಿರುತ್ತದೆ.
ವಸ್ತುವೊಂದು ನೆಲಸೆಳೆತಕ್ಕೆ ಒಳಗಾದಾಗ ಅದರ ವೇಗಮಾರ್ಪು 9.81 m/s2 ನಷ್ಟಿರುವುದು ಪ್ರಯೋಗಗಳಿಂದ ತಿಳಿದುಬಂದಿದೆ. ಇದನ್ನು ನೆಲಸೆಳೆತದಿಂದಾದ ವೇಗಮಾರ್ಪು (acceleration due to gravity) ಎಂದು ಕರೆಯುತ್ತಾರೆ. ಇದನ್ನು ‘g’ ಗುರುತಿನಿಂದ ಗುರುತಿಸಲಾಗುತ್ತದೆ. ನೆಲದ ಮೇಲ್ಮೈಯ ಎತ್ತರಕ್ಕೆ ಅನುಗುಣವಾಗಿ ಇದರ ಬೆಲೆ ತುಸು ಬದಲಾದರೂ ಸರಾಸರಿಯಾಗಿ 9.81 m/s2 ಅಂತಾ ಬಳಸುವುದರಿಂದಲೆಕ್ಕಾಚಾರದಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಆಗುವುದಿಲ್ಲ.
ಕೆಳಗಿನ ಚಿತ್ರದಲ್ಲಿ ನೆಲಸೆಳೆತದಿಂದಾಗುವ ವೇಗದ ಬದಲಾವಣೆಯನ್ನು ಅಂದರೆ ವೇಗಮಾರ್ಪನ್ನು ತೋರಿಸಲಾಗಿದೆ. ವಸ್ತುವೊಂದನ್ನು ಕೈಯಲ್ಲಿ ಹಿಡಿದಿರುವಾಗ ಅದರ ವೇಗ ’0’ ಆಗಿರುತ್ತದೆ ಅದೇ ನೆಲದೆಡೆಗೆ ಅದನ್ನು ಬಿಟ್ಟರೆ ಅದರ ವೇಗ ಪ್ರತಿ ಸೆಕೆಂಡಿಗೆ 9.81 ಮೀಟರ್ ನಷ್ಟು ಬದಲಾಗುತ್ತಾ ಹೋಗುತ್ತದೆ. ಕೈಬಿಟ್ಟ ಮೊದಲ ಸೆಕೆಂಡಿಗೆ ಅದರ ವೇಗ 9.81 m/s ಆಗಿದ್ದರೆ, ಎರಡನೇ ಸೆಕೆಂಡಿಗೆ ಅದು 9.81 X 2 = 19.6 m/s, ಮೂರನೇ ಸೆಕೆಂಡಿಗೆ 9.81 X 3 = 29.4 m/s ಆಗಿರುತ್ತದೆ. ಹೀಗೆ ನೆಲ ತಲುಪುವವರೆಗೂ ಅದರ ವೇಗ ಒಂದೇ ಮಟ್ಟದಲ್ಲಿ ಬದಲಾಗುತ್ತಾ ಹೋಗುತ್ತದೆ.
ವಸ್ತುವೊಂದರ ವೇಗವು ಯಾವ ಮಟ್ಟದಲ್ಲಿರುತ್ತದೆ ಮತ್ತು ಆ ವೇಗ ಯಾವ ಮಟ್ಟದಲ್ಲಿ ಮಾರ್ಪಡುತ್ತದೆ ಅನ್ನುವುದರ ಮೇಲೆ, ಆ ವಸ್ತುವು ಎಷ್ಟು ಬೇಗ ಸಾಗುತ್ತದೆ ಅನ್ನುವುದು ತೀರ್ಮಾನವಾಗುತ್ತದೆ. ಬೇರಾವುದೇ ಬಲಕ್ಕೆ ಒಳಪಡದೆ ಬರೀ ನೆಲಸೆಳತದ ಬಲಕ್ಕೆ ಒಳಪಟ್ಟ ವಸ್ತುಗಳ ವೇಗಮಾರ್ಪಿನ ಮಟ್ಟ ಒಂದೇ ಆಗಿರುತ್ತದೆ. ಅಂದರೆ ಅದಾವುದೇ ವಸ್ತುವಿದ್ದರೂ ಅದರ ವೇಗ ಪ್ರತಿ ಸೆಕೆಂಡಿಗೆ 9.81 m/s ನಷ್ಟು ಬದಲಾಗುತ್ತದೆ.
ಈಗ ಈ ಬರಹದ ಮೊದಲ ಭಾಗದಲ್ಲಿರುವ ಪ್ರಶ್ನೆಗಳು ಮತ್ತು ವೇಗಮಾರ್ಪಿನ ಮೇಲಿನ ತಿಳುವಳಿಕೆಯನ್ನು ತಳಕುಹಾಕಿದರೆ, ಬರಿದುದಾಣದಲ್ಲಿ (vaccum) ವಸ್ತುಗಳು ನೆಲವನ್ನು ಸೇರಲು ತೆಗೆದುಕೊಳ್ಳವ ಹೊತ್ತು ’ವೇಗಮಾರ್ಪಿನ’ ಮೇಲೆ ನಿಂತಿದೆ ಹೊರತು ಅವುಗಳ ’ರಾಶಿಯ’ (mass) ಮೇಲಲ್ಲ ಅನ್ನುವುದು ತಿಳಿದುಬರುತ್ತದೆ. ನೆಲಸೆಳೆತದಿಂದಾಗುವ ವೇಗಮಾರ್ಪು ಬದಲಾಗದಿರುವುದರಿಂದ ತೂಕದ ಮತ್ತು ಹಗುರವಾದ ಎರಡೂ ವಸ್ತುಗಳೂ ಒಂದೇ ಹೊತ್ತಿಗೆ ನೆಲವನ್ನು ಸೇರುತ್ತವೆ.
ಈ ತಿಳುವಳಿಕೆಯನ್ನು ನ್ಯೂಟನ್ರ ಎರಡನೇ ಕಟ್ಟಲೆಯಿಂದಲೂ ಕೆಳಗಿನಂತೆ ತೋರಿಸಬಹುದು. ಈ ಕಟ್ಟಲೆಯ ಪ್ರಕಾರ,
ಬಲ = ರಾಶಿ X ವೇಗಮಾರ್ಪು
>> F = m X a
ಇಲ್ಲಿ, ವೇಗಮಾರ್ಪು ‘ನೆಲಸೆಳೆತದಿಂದಾದ ವೇಗಮಾರ್ಪು’ ಆಗಿರುವುದರಿಂದ a = g = 9.81 m/s2 ಆಗಿರುತ್ತದೆ.
ಈಗ ತೂಕದ ವಸ್ತುವನ್ನು 1 ರಿಂದ ಮತ್ತು ಹಗುರವಾದ ವಸ್ತುವನ್ನು 2 ರಿಂದ ಸೂಚಿಸೋಣ.
ತೂಕದ ವಸ್ತು : F1 = m1 X g
ಹಗರುವಾದ ವಸ್ತು : F2 = m2 X g
>> F1/m1 = F2/m2
ಮೇಲಿನ ನಂಟಿನಿಂದ ತಿಳಿದುಬರುವುದೇನೆಂದರೆ, ತೂಕದ ಮತ್ತು ಹಗುರವಾದ ವಸ್ತುಗಳ ನೆಲಸೆಳೆತದ ಬಲ ಮತ್ತು ರಾಶಿಗಳ ಅನುಪಾತ ಒಂದೇ ಆಗಿರುತ್ತದೆ. ಅಂದರೆ ತೂಕದ ವಸ್ತುವು ಹೆಚ್ಚಿನ ನೆಲಸೆಳೆತದ ಬಲಕ್ಕೆ ಒಳಪಟ್ಟರೂ ಅದರ ಹೆಚ್ಚಿನ ರಾಶಿ ಅದರ ಪರಿಣಾಮವನ್ನು ಕಡಿಮೆ ಮಾಡುತ್ತದೆ.
ಸರಿ. ಬರಿದುದಾಣದಲ್ಲಿ ತೂಕದ ಮತ್ತು ಹಗುರವಾದ ವಸ್ತುಗಳು ನೆಲ ತಲುಪಲು ಅಷ್ಟೇ ಹೊತ್ತನ್ನು ತೆಗೆದುಕೊಳ್ಳುವುದೇಕೆ ಎಂದು ತಿಳಿದೆವು. ಆದರೆ ಗಾಳಿಯ ಸುತ್ತಣ ಇದ್ದಾಗ ಏನಾಗುತ್ತದೆ? ನಮ್ಮ ದಿನದ ಬದುಕಿನಲ್ಲಿ ಕಾಣುವಂತೆ ತೂಕದ ವಸ್ತುವೇಕೆ ಮೊದಲು ನೆಲವನ್ನು ತಲಪುತ್ತದೆ? ಅನ್ನುವ ಪ್ರಶ್ನೆ ಹಾಗೇ ಉಳಿಯುತ್ತದೆ ಅಲ್ಲವೇ.
ಗಾಳಿಯ ಸುತ್ತಣದಲ್ಲಿ ವಸ್ತುಗಳನ್ನು ಬಿಟ್ಟಾಗ ನೆಲಸೆಳೆತದ ಜತೆಗೆ ಇನ್ನೊಂದು ಬಲವು ವಸ್ತುಗಳ ಮೇಲೆ ಎರಗುತ್ತದೆ. ಅದೇ ಎಳೆತದ ಬಲ (drag force) ಇಲ್ಲವೇ ಗಾಳಿತಡೆ (air resistance). ಈ ಬಲವು ವಸ್ತುಗಳ ಸಾಗಾಣೆಯ ಎದುರಾಗಿ ಕೆಲಸ ಮಾಡುತ್ತದೆ ಅಂದರೆ ನೆಲಸೆಳೆತದಿಂದಾಗಿ ಕೆಳಗೆ ಸಾಗುತ್ತಿರುವ ವಸ್ತುವಿನ ಮೇಲೆ ಗಾಳಿಯ ಎಳೆತದ ಬಲವು ಮೇಲ್ಮುಖವಾಗಿರುತ್ತದೆ.
ಗಾಳಿಯ ಸುತ್ತಣದಿಂದಾಗುವ ಈ ಎಳೆತ ಬಲದ ಮಟ್ಟವು ವಸ್ತುವಿನ ದಟ್ಟಣೆ (density), ವೇಗ (velocity), ಹರವಿಗೆ (area) ತಕ್ಕಂತೆ ಇರುತ್ತದೆ. ಒಂದೇ ಹರವಿನ ಆದರೆ ಎರಡು ಬೇರೆ ತೂಕವುಳ್ಳ ವಸ್ತುಗಳನ್ನು ಹೋಲಿಸಿದರೆ, ತೂಕದ ವಸ್ತುವಿನ ಮೇಲೆ ಈ ಎಳೆತ ಬಲದ ಪರಿಣಾಮ ಕಡಿಮೆ ಇರುತ್ತದೆ. ಇದನ್ನು ಗಣಿತದ ನಂಟುಗಳಿಂದ ಈ ಕೆಳಗಿನಂತೆ ತೋರಿಸಬಹುದು.
ತೂಕದ ವಸ್ತುವಿನ ಮೇಲೆ ಎರಗುವ,
ಒಟ್ಟು ಬಲ = ನೆಲಸೆಳೆತದ ಬಲ (gravitational force) – ಎಳೆತದ ಬಲ (drag force),
Fn = F1 – Fd
ಇಲ್ಲಿ, F1 = ನೆಲಸೆಳೆತದ ಬಲ, Fd = ಎಳೆತದ ಬಲ.
ಎಳೆತದ ಬಲವು ಸಾಗಾಟದ ಎದುರಾಗಿ ಕೆಲಸ ಮಾಡುವುದರಿಂದ ಕಳೆ ಗುರುತನ್ನು ಬಳಸಲಾಗಿದೆ.
>> Fn = F1 – Fd ನಂಟಿಗೆ ತೂಕದ ವಸ್ತುವಿನ ರಾಶಿ ’m1′ ನಿಂದ ಬಾಗಿಸಿದಾಗ (divide),
>> Fn/m1 = F1/m1 – Fd/m1
>> a1 = g – Fd/m1
ಇಲ್ಲಿ, a1 = ತೂಕದ ವಸ್ತುವಿನ ಒಟ್ಟಾರೆ ವೇಗಮಾರ್ಪು, g = ನೆಲಸೆಳೆತದಿಂದಾದ ವೇಗಮಾರ್ಪು
ಈ ಮೇಲಿನ ನಂಟು ನಾವು ಈ ಮೊದಲು ಕಂಡುಕೊಂಡ ವಿಷಯವನ್ನೇ ಹೇಳುತ್ತದೆ. ರಾಶಿ ಹೆಚ್ಚಿರುವ ವಸ್ತುವಿನ ಮೇಲೆ ಗಾಳಿ ಎಳೆತದ ಪರಿಣಾಮ ಕಡಿಮೆ ಇರುತ್ತದೆ ಏಕೆಂದರೆ ರಾಶಿ ಹೆಚ್ಚಿದಂತೆ ‘Fd/m1’ ನ ಬೆಲೆ ಕಡಿಮೆಯಾಗುತ್ತದೆ ಮತ್ತು ಆ ಮೂಲಕ ವಸ್ತುವಿನ ಒಟ್ಟು ವೇಗಮಾರ್ಪು ‘a1’ ಹೆಚ್ಚುತ್ತದೆ.
ಹಾಗಾಗಿ ಗಾಳಿಯ ಸುತ್ತಣವಿರುವಾಗ ತೂಕದ ವಸ್ತುವು ಹಗುರವಾದ ವಸ್ತುವಿಗಿಂತ ಬೇಗನೆ ನೆಲವನ್ನು ತಲಪುತ್ತದೆ ಮತ್ತು ಬರಿದಿನಲ್ಲಿ (vacuum) ಗಾಳಿ ಎಳೆತದ ಬಲ ಇಲ್ಲದಿರುವುದರಿಂದ, ನೆಲಸೆಳೆತದ ವೇಗಮಾರ್ಪು ಬದಲಾಗದಿರುವುದರಿಂದ ತೂಕ ಮತ್ತು ಹಗುರವಾದ ಎರಡೂ ವಸ್ತುಗಳು ಒಂದೇ ಹೊತ್ತಿಗೆ ನೆಲವನ್ನು ತಲಪುತ್ತವೆ.







Pingback: viagra usa
Pingback: generic cialis cost
Pingback: cialis canada
Pingback: where to buy cialis
Pingback: cialis pills
Pingback: Buy branded viagra
Pingback: Low cost canadian viagra
Pingback: cheap viagra 100mg free shipping
Pingback: cialis 20mg
Pingback: generic viagra available
Pingback: naltrexone order
Pingback: price of cialis
Pingback: cialis walmart
Pingback: cialis price walgreens
Pingback: acetaminophen 500 mg tabs
Pingback: cialis cost
Pingback: chloroquine cost us
Pingback: cheap viagra
Pingback: viagra 50mg
Pingback: viagra 100mg
Pingback: top erection pills
Pingback: erection pills
Pingback: online pharmacy
Pingback: cialis online
Pingback: levitra 20 mg
Pingback: levitra 10mg
Pingback: sildenafil for sale
Pingback: order cialis online
Pingback: generic cialis
Pingback: viagra prescription
Pingback: usa viagra sales
Pingback: generic for cialis
Pingback: female viagra
Pingback: viagra
Pingback: when to take viagra
Pingback: buy generic viagra
Pingback: sildenafil
Pingback: buy viagra without prescription
Pingback: viagra alternative
Pingback: buy viagra cheap
Pingback: viagra without a doctor prescription
Pingback: order viagra online
Pingback: buy cialis
Pingback: where can you buy viagra or cialis or levitra online without a prescription
Pingback: cialis wirkung
Pingback: otc cialis
Pingback: viagra for sale
Pingback: viagra alternative
Pingback: buy viagra
Pingback: viagra cheap
Pingback: cialis
Pingback: viagra without a doctor prescription
Pingback: viagra substitute
Pingback: order viagra online
Pingback: viagra coupons
Pingback: buy viagra dublin
Pingback: ebay cialis
Pingback: viagra use in women
Pingback: generic cialis effectiveness
Pingback: buy cialis online no prescription
Pingback: buy cialis
Pingback: generic viagra trusted pharmacy
Pingback: how efective is generic viagra
Pingback: cialis online
Pingback: viagra headache cure
Pingback: russia viagra
Pingback: online viagra reviews
Pingback: order viagra online overnight
Pingback: how much is viagra in mexico
Pingback: cialis generic reviews
Pingback: order viagra without prescription
Pingback: buy viagra in new zealand
Pingback: buy viagra fast
Pingback: buy generic cialis pills
Pingback: yp health care viagra