ಇದ್ದಿಲ ಒಲೆಯಿಂದ ಮಿಂಚಿನ ಕಸುವು

ಪ್ರಶಾಂತ ಸೊರಟೂರ.

Picture2

ಗುಡ್ಡಗಾಡು ಇಲ್ಲವೇ ಕಾಡಿನೊಳಗೆ ನೆಲೆಗೊಂಡಿರುವ ಜಗತ್ತಿನ ಸಾವಿರಾರು ಹಳ್ಳಿಗಳು ಇಂದೂ ಕೂಡಾ ಎಲೆಕ್ಟ್ರಿಸಿಟಿಯಿಂದ ದೂರ ಉಳಿದಿವೆ. ಹಲವಾರು ದೇಶಗಳಲ್ಲಿ ಹಣದ ಇಲ್ಲವೇ ಚಳಕದ (technology) ಕೊರತೆಯಿಂದಾಗಿ ಎಲೆಕ್ಟ್ರಿಸಿಟಿಯನ್ನು ಎಲ್ಲರಿಗೆ, ಎಲ್ಲ ಕಡೆ ತಲುಪಿಸಲು ಆಗುತ್ತಿಲ್ಲ. ಇಂತ ಹಲವಾರು ಕಡೆ ಮೊಬೈಲುಗಳು ಎಟಕುವಂತಾಗಿದ್ದರೂ ಅವು ಕಳೆಗುಂದಿದಾಗ ಹುರುಪು ತುಂಬಲು ಕರೆಂಟ್ ಇಲ್ಲದಂತಾಗಿದೆ. ಎಲೆಕ್ಟ್ರಿಸಿಟಿ ಸರಳವಾಗಿ ಎಟುಕದ ನೆಲೆಗಳಲ್ಲಿ ಮಂದಿಗೆ ನೆರವಾಗುವಂತೆ ಹೊಸ ಸಲಕರಣೆಯೊಂದನ್ನು ‘ಪಾಯಿಂಟ್ ಸೋರ್ಸ್ ಪವರ್’ ಎಂಬ ಕೂಟ ಹೊರತಂದಿದೆ.

ಉರಿಯುತ್ತಿರುವ ಇದ್ದಿಲ ಒಲೆಯಲ್ಲಿ ಚಿಕ್ಕ ಕೋಲಿನಂತೆ ಕಾಣುವ ಉರು ಬಟ್ಟಲು (fuel cell) ಇಟ್ಟಾಗ ತುಸು ಹೊತ್ತಿನಲ್ಲಿಯೇ ಉರು ಬಟ್ಟಲಿನ ಇನ್ನೊಂದು ತುದಿಯಲ್ಲಿ ಕರೆಂಟ್ ಹರಿಯ ತೊಡಗುತ್ತದೆ. ಈ ಕರೆಂಟನ್ನು ಅಲೆಯುಲಿಗೆ (ಮೊಬಾಯ್ಲ್) ಹುರುಪು ತುಂಬಲು, ಚಿಕ್ಕ ದೀಪ ಬೆಳಗಿಸಲು ಇಲ್ಲವೇ ಇನ್ನಾವುದೋ ಚಿಕ್ಕ ಸಲಕರಣೆ ನಡೆಸಲು ಬಳಸಬಹುದು. ಸಾಮಾನ್ಯವಾಗಿ ಬಳಕೆಯಲ್ಲಿರುವ ಒಲೆಯಿಂದಲೇ ಹೀಗೆ ಕರೆಂಟ್ ಪಡೆಯುವಂತಾದರೇ ಹಲವಾರು ದೂರದ ಹಳ್ಳಿಗಾಡುಗಳಿಗೆ ತುಂಬಾ ನೆರವಾಗುತ್ತದೆ.

ಇತ್ತೀಚಿನ ವರುಶಗಳಲ್ಲಿ ಹಲವಾರು ಕಡೆ ಬಳಕೆಯಾಗುತ್ತಿರುವ ಉರು ಬಟ್ಟಲು (fuel cell) ಹಿಂದಿರುವ ಚಳಕವೆಂದರೆ ಹೈಡ್ರೋಜನ್ ನಂತಹ ಉರುವಲು ಗಾಳಿ ಮತ್ತು ಉಸಿರುಗಾಳಿಯನ್ನು (ಆಕ್ಸಿಜನ್) ಎಡೆಬಿಡದ ರಾಸಾಯನಿಕ ಒಡನಾಟಕ್ಕೆ ಒಳಪಡಿಸಿ ಕರೆಂಟನ್ನು ಪಡೆಯುವುದು. (ಕೆಳಗಿನ ಚಿತ್ರ ನೋಡಿ)

ಉರು ಬಟ್ಟಲಿನಲ್ಲಿ (fuel cell) ಹೆಚ್ಚಾಗಿ ಹೈಡ್ರೋಜನ್ ಗಾಳಿಯನ್ನು ಉರುವಲಾಗಿ ಬಳಸಿದರೂ ಈ ಬರಹದಲ್ಲಿ ತಿಳಿಸಲಾದ ’ಒಲೆಯಿಂದ ಕರೆಂಟ್’ ಪಡೆಯುವ ಸಲಕರಣೆಯಲ್ಲಿ ಇದ್ದಿಲಿನಲ್ಲಿರುವ ಕರಿಗೆಯನ್ನು (ಕಾರ‍್ಬನನ್ನು) ಉರುವಲಾಗಿ ಬಳಸಲಾಗುತ್ತದೆ. ಕತ್ತಲೆ ತೊಡೆದುಹಾಕಿ ಬಾಳು ಹಸನಾಗಿಸುವಂತ ಇಂತ ಹೊಸ ಹೊಸ ಸಲಕರಣೆಗಳು ಅರಿಮೆಯ ಬೆಳಕಿಗೆ ಹಲವಾರು ಕಡೆ ಹೀಗೆ ಮುನ್ನುಡಿ ಬರೆಯುತ್ತಿವೆ.

ಮಾಹಿತಿಸೆಲೆ today.az  pointsourcepower

ಕರೆಂಟ್ ಶಾಕ್ – ಏನಿದರ ಹಿನ್ನೆಲೆ?

ಹರ್ಷಿತ್ ಮಂಜುನಾಥ್.

electric shock

ನೀವೊಂದು ಗಾದೆ ಕೇಳಿರಬಹುದು.

ಬಟ್ಟೆ ಮುಳ್ಳಿನ ಮೇಲೆ ಬಿದ್ದರು, ಮುಳ್ಳೇ ಬಟ್ಟೆಯ ಮೇಲೆ ಬಿದ್ದರೂ ಹರಿಯುವುದು ಬಟ್ಟೆಯೇ!

ಈ ಗಾದೆಗೂ ಮಾನವನಿಗೂ ಮಿಂಚುಹೊಡೆತಕ್ಕೂ (Electric shock) ತುಂಬಾ ಹೊಂದಾಣಿಕೆಯಿದೆ. ಅಂದರೆ ಮನುಷ್ಯನ ಮಯ್ಯಿಗೆ ಮಿಂಚು ತಗಲಿದರೂ, ಮಿಂಚಿಗೆ ಮಯ್ಯಿ ತಗುಲಿದರೂ ಮಿಂಚುಹೊಡೆತಗಳು ಅನುಭವವಾಗುವುದು ಮನುಷ್ಯನಿಗೆ.  ಮಯ್ ತೊಗಲು, ಹುರಿಕಟ್ಟು(Muscle), ಕೂದಲು ಸೇರಿದಂತೆ ಮನುಷ್ಯನ ಅಂಗಗಳು ಮಿಂಚಿನ ಹರಿವಿಗೆ ತಗಲುವುದರಿಂದ ಮಿಂಚುಹೊಡೆತಗಳು ಏರ್ಪಡುತ್ತವೆ.

ಸಾಮಾನ್ಯವಾಗಿ ಮನುಷ್ಯನ ಗಮನಕ್ಕೆ ಬರಬಲ್ಲ ಮಿಂಚು, ಮಿಂಚಿನ ನೇರ ಹರಿವು(Direct current) ಅತವಾ ಬದಲಿ ಹರಿವು (Alternate current) ಮತ್ತು ಸಲದೆಣಿಕೆ(Frequency)ಯನ್ನು ನೆಚ್ಚಿಕೊಂಡಿರುತ್ತದೆ. ಆದರೆ ಕೆಲವೊಮ್ಮೆ ಸಣ್ಣ ಪ್ರಮಾಣದ ಮಿಂಚು ಮನುಷ್ಯನ ಗಮನಕ್ಕೆ ಬಾರದೆಯೂ ಇರಬಹುದು. ಅಷ್ಟಕ್ಕೂ ಮಯ್ಯಿಗೆ ಮಿಂಚು ತಗುಲಿದೊಡನೆ ಮಯ್ಯಿ ಮಿಂಚನ್ನು ಏಕೆ ಸೆಳೆದುಕೊಳ್ಳುತ್ತದೆ? ಮಿಂಚು ಮನುಷ್ಯನ ಮಯ್ಯ ಮೇಲೆ ಹರಿದಾಡಲು ನೆರವಾಗಬಲ್ಲ ಅಂಶಗಳೇನು? ಮತ್ತು ಮಿಂಚೊಡೆತಗಳು ಮನುಷ್ಯನ ಬದುಕಿಗೆ ಹೇಗೆ ಕುತ್ತು ತರುತ್ತವೆ? ಎಂಬುದನ್ನು ಮುಂದೆ ತಿಳಿಯೋಣ.

ಮನುಷ್ಯನ ಮಯ್ಯಿಗೆ ಮಿಂಚು ತಗಲಿದೊಡನೆ ಮಯ್ಯಿ ಮಿಂಚನ್ನು ಸೆಳೆದುಕೊಳ್ಳಲು ಮುಕ್ಯ ಕಾರಣ ರಾಸಾಯನಿಕ ಕಸುವು (Chemical energy). ಇದು ಮಯ್ಯಿಯ ಒಳಗಡೆ ಏರ್ಪಡುವ ಸೀರಕೂಟಗಳು (Atoms)  ಮತ್ತು ಅಣುಕೂಟಗಳ (Molecules) ಪ್ರತಿಕ್ರಿಯೆಯಿಂದ (Reactions) ಏರ್ಪಡುತ್ತದೆ.

  • ನಾವು ಸೇವಿಸುವ ಕೆಲವು ಆಹಾರ ಹೊಟ್ಟೆಯೊಳಗೆ ಕರಗುವ ಹೊತ್ತಿನಲ್ಲಿ ಆಹಾರಗಳಲ್ಲಿರುವ ಅಣುಕೂಟಗಳು ಚಿಕ್ಕ ಚಿಕ್ಕ ಅಣುಕೂಟಗಳಾಗಿ ಬೇರ್ಪಡುತ್ತವೆ. ಈ ಅಣುಕೂಟಗಳು ಮನುಷ್ಯನ  ಮಯ್ಯೊಳಗೆ ಉಸಿರುಗಾಳಿ(O2-Oxygen), ಸೋಡಿಯಂ (Na-Sodium), ಪೊಟ್ಯಾಶಿಯಂ  (K-Potassium), ಮತ್ತು ಬೇರುಸುಣ್ಣ(Ca-Calcium) ನಂತಹ ಬೇರಡಕಗಳನ್ನು (Elements) ಕಟ್ಟಿಕೊಡುತ್ತದೆ.
  • ಅಲ್ಲದೇ ಇವೆಲ್ಲಕ್ಕೂ ಅದರದ್ದೇ ಆದ ಮಿಂಚಿನ ಹುರುಪು (Electrical charge) ಇರುತ್ತದೆ. ಅಂದರೆ ಇವುಗಳಲ್ಲಿ ಗೊತ್ತುಮಾಡಿದ ಎಣಿಕೆಯ ಕೊಡುವಣಿಗಳು (Protons), ನೆಲೆವಣಿಗಳು (Neutrons) ಮತ್ತು ಕಳೆವಣಿಗಳು (Electrons) ಇರುತ್ತವೆ. ಇಂತಹ ಮಿಂಚಿನ ಹುರುಪುಗಳು ಕೂಡು-ಹುರುಪು (Positive charge) ಆಗಿರಲೂಬಹುದು ಅತವಾ ಕಳೆ-ಹುರುಪು(Negative charge) ಆಗಿರಲೂಬಹುದು, ಒಟ್ಟಿನಲ್ಲಿ ಇವು ಅಣುಕೂಟಗಳೊಂದಿಗೆ ಪ್ರತಿಕ್ರಿಯಿಸುತ್ತದೆ.
  • ಇಂತಹ ಕ್ರಿಯೆಯನ್ನು ಅಣು ಕೂಡಿಕೆ (Nuclear fusion) ಎನ್ನುವರು, ಮತ್ತು ಈ ಪ್ರಕ್ರಿಯೆಗಳು ಮಿಂಚು ಹರಿಯಲು ಬೇಕಾದ ಕಸುವನ್ನು ಹುಟ್ಟುಹಾಕುತ್ತದೆ.

ಹೀಗೆ ಮಿಂಚು ಮಯ್ಯ ಒಳಗಡೆಗೆ ಹರಿಯಲು ಬೇಕಾದ ಅಂಶಗಳು ಮಯ್ಯಲ್ಲಿರುವುದರಿಂದ ಮಿಂಚು ಮಯ್ಯೊಳಗೆ ಹರಿದು ಮಿಂಚೊಡೆತದ ಅರಿವು ನಮಗಾಗುತ್ತದೆ. ಇಂತಹ ಮಿಂಚುಹೊಡೆತಗಳು ಸಾವು ತರಲೂಬಹುದು. ಹೀಗೆ ಮಿಂಚಿನಿಂದಾಗುವ ಸಾವನ್ನು ಮಿಂಮಡಿತ (Electrocution) ಎನ್ನುವರು. ಆದರೆ ನಿಮಗೆ ತಿಳಿದಿರಲಿ, ಹೆಚ್ಚಿನ ಮಿಂಚೊಡೆತದ ಸಾವುಗಳು ಮಿಂಚಿನ ಬದಲಿ ಹರಿವಿನಿಂದ ಆಗುತ್ತದೆ. ಮತ್ತು ಹೆಚ್ಚಾಗಿ 500 ವೋಲ್ಟ್ ಗಿಂತಲೂ ಕಡಿಮೆ ಹರಿವಿನಿಂದ ಆಗುತ್ತದೆ. ಅಂದ ಮಾತ್ರಕ್ಕೆ ಹೆಚ್ಚು ವೋಲ್ಟ್ ಇರುವ ಮಿಂಚೊಡೆತ ಅಪಾಯಕಾರಿಯಲ್ಲ ಎಂದಲ್ಲ. ಇಲ್ಲಿ ಮನುಷ್ಯನ ಮಯ್ಯಲ್ಲಿರುವ ತಡೆತ(Resistance) ಹೆಚ್ಚಿನ ಪಾತ್ರವಹಿಸುತ್ತದೆ.

ಅಂದರೆ ಮಯ್ಯ ಒಣಬಾಗಕ್ಕೆ ಮಿಂಚು ತಗುಲಿದರೆ ಮಯ್ಯೊಳಗೆ ಹರಿಯಬಲ್ಲ ಮಿಂಚಿನ ಸಾಧ್ಯತೆಗಿಂತ, ತಂಪಿನ ಭಾಗಕ್ಕೆ ಮಿಂಚು ತಗುಲಿದರೆ ಮಿಂಚೊಡೆತ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಕಾರಣ ಒಣಭಾಗಕ್ಕೆ ಹೆಚ್ಚಿನ ತಡೆತವಿರುತ್ತದೆ. ಹಾಗಾಗಿ ಇದು ಅಷ್ಟು  ಬೇಗನೆ ಮಿಂಚನ್ನು ತನ್ನೊಳಗೆ ಬಿಟ್ಟುಕೊಳ್ಳುವುದಿಲ್ಲ. ಆದರೆ ತಂಪಿರುವ ಭಾಗಕ್ಕೆ ತಡೆತ ಕಡಿಮೆ ಇರುವುದರಿಂದ ಬೇಗನೆ ಮಿಂಚು ಮಯ್ಯೊಳಗೆ ಹರಿಯುತ್ತದೆ. ಮಿಂಚು ಮನುಷ್ಯನ ಮಯ್ಯ ಯಾವುದೇ ಬಾಗಕ್ಕೆ ತಾಕಿದರೂ ಆ ಭಾಗವನ್ನು ಹಾನಿಗೊಳಿಸುತ್ತದೆ. ಹಾಗಾಗಿ ಮಿಂಚೊಡೆತದಿಂದ ಗಾಯಗಳಾಗುವುದು ಸಹಜ.

ಆದರೆ ಇಲ್ಲಿ ನಾವು ಕೆಲವು ವಿಷಯಗಳನ್ನು ಗಮನಿಸಬೇಕು.

  • ಮಿಂಚೊಡೆತ ನಡೆದಾಗ ಎಷ್ಟು ಆಂಪ್ (Amp) ಮಿಂಚು ಒಳಹರಿವಾಗಿದೆ.
  • ಮಯ್ಯಲ್ಲಿ ಮಿಂಚು ಹರಿದಾಡುವ ದಾರಿ
  • ಮಯ್ಯಿ ಮಿಂಚಿಗೆ ಸೋಕಿರುವ ಒಟ್ಟು ಹೊತ್ತು.

ಮಿಂಚೊಡೆತದಿಂದ ಮಯ್ಯಲ್ಲಿ ಆಗಬಹುದಾದ ಅರಿದಾದ (important) ತೊಂದರೆಗಳೆಂದರೆ,
i. ಮಯ್ ಸುಡುವಿಕೆ (burns): ಮಿಂಚಿನ ಹರಿವಿಗೆ  ಮಯ್ ಒಡ್ಡುವ ತಡೆತದಿಂದಾಗಿ (resistance) ಹೊಮ್ಮುವ ಬಿಸುಪು (heat) ಗೂಡುಕಟ್ಟುಗಳನ್ನು (tissues) ಸುಡುತ್ತದೆ.
ii. ಗುಂಡಿಗೆಯ ತೊರೆಗೋಣೆಗಳಏರ್ಪಡಿತವನ್ನು ಉಂಟುಮಾಡುತ್ತದೆ (ventricular fibrillation).
iii. ಮಿಂಚು ತನ್ನ ಹರಿವಿನ ಹಾದಿಯಲ್ಲಿ ಬರುವು ನರಗಳಿಗೂ ಹಾನಿಯನ್ನುಂಟು ಮಾಡುವ ಅಳವನ್ನು ಹೊಂದಿದೆ.

ಮಿಂಚೊಡೆತದಿಂದ ಮಯ್ಯಲ್ಲಿ ಉಂಟಾಗುವ ಏರು-ಪೇರುಗಳು ಮನುಷ್ಯರನ್ನು ಸಾವಿನ ದವಡಿಗೂ ನೂಕಬಹುದು. ಹೀಗೆ ಮಿಂಚೊಡೆತದಿಂದ  ಆಗುವು ಸಾವನ್ನು ‘ಎಲೆಕ್ಟ್ರಿಕ್ಯೂಶನ್’ ಎಂದು ಹೇಳಲಾಗುತ್ತದೆ. ಕನ್ನಡದಲ್ಲಿ ಇದನ್ನು ‘ಮಿಂಮಡಿತ’ ಎಂದು ಹೇಳಬಹುದು. ‘ಎಲೆಕ್ಟ್ರಿಕ್ಯೂಶನ್’ ಪದವನ್ನು 1890 ರಲ್ಲಿ ಮೊದಲಸಲ ಬಳಸಲಾಯಿತು. ಆ ಹೊತ್ತಿನಲ್ಲಿ ಮಿಂಚನ್ನು ಬಳಸಿ ಕೈದಿಗಳನ್ನು ಕೊಲ್ಲುತ್ತಿದ್ದ ಬಗೆಯನ್ನಷ್ಟೇ ‘ಎಲೆಕ್ಟ್ರಿಕ್ಯೂಶನ್’ ಎಂದು ಕರೆಯುತ್ತಿದ್ದರು. ಮುಂದೆ ಮಿಂಚಿನ ಕೆಟ್ಟಾಗುಹಗಳಿಂದ (accident) ಉಂಟಾಗುವ ಸಾವುಗಳಿಗೂ ‘ಎಲೆಕ್ಟ್ರಿಕ್ಯೂಶನ್’ ಪದವನ್ನು ಬಳಸಲಾರಂಬಿಸಿದರು.

(ತಿಟ್ಟಸೆಲೆ: dawsonpower.com)